ಕನ್ನಡ ಸಾಹಿತ್ಯ ರಂಗದ ಮೈಲಿಗಲ್ಲುಗಳು
೨೦೦೪
ನ್ಯೂ ಜೆರ್ಸಿ ರಾಜ್ಯದಲ್ಲಿ ಕನ್ನಡ ಸಾಹಿತ್ಯ ರಂಗದ ದಾಖಲೆ, ಆರ್ಥಿಕ ಲಾಭೋದ್ದೇಶವಿಲ್ಲದ ಸಾಂಸ್ಕೃತಿಕ, ಶೈಕ್ಷಣಿಕ ಸಂಸ್ಥೆ ಎಂಬ ಅಧಿಕೃತ ಅಭಿದಾನ. (Federal EIN: 20-0939357)
ಮೇ ೨೯, ಮೊಟ್ಟಮೊದಲ ಕನ್ನಡ ಸಾಹಿತ್ಯ ಸಮ್ಮೇಳನ, ಫ಼ಿಲಡೆಲ್ಫ಼ಿಯಾ ಬಳಿಯ ವಿಲನೋವ ವಿಶ್ವವಿದ್ಯಾಲಯದಲ್ಲಿ.
ಸಹಪ್ರವರ್ತಕರು: ವಿಲನೋವ ವಿಶ್ವವಿದ್ಯಾಲಯದ ಪ್ರಾಚೀನ ಮತ್ತು ಅಧುನಿಕ ಭಾಷಾ ಸಾಹಿತ್ಯಗಳ ವಿಭಾಗ; ಸಹಕಾರ: ತ್ರಿವೇಣಿ (ಪೆನ್ಸಿಲ್ವೇನಿಯ, ನ್ಯೂ ಜೆರ್ಸಿ, ಡೆಲವೇರ್ ತ್ರಿರಾಜ್ಯ ಕನ್ನಡ ಕೂಟ)
ಮುಖ್ಯ ವಸ್ತು: ಕುವೆಂಪು ಜನ್ಮ ಶತಮಾನೋತ್ಸವ
ಮುಖ್ಯ ಅತಿಥಿ: ಡಾ. ಪ್ರಭುಶಂಕರ; ಭಾಷಣ: “ಕನ್ನಡ ಸಾಹಿತ್ಯ: ಒಂದು ಮಿಂಚು ನೋಟ”
ಪುಸ್ತಕ ಬಿಡುಗಡೆ: “ಕುವೆಂಪು ಸಾಹಿತ್ಯ ಸಮೀಕ್ಷೆ” ಪ್ರಧಾನ ಸಂಪಾದಕ: ನಾಗ ಐತಾಳ
೨೦೦೫
ತ್ರಿವೇಣಿ ನಡೆಸಿದ ಪುತಿನ ಜನ್ಮ ಶತಮಾನೋತ್ಸವದಲ್ಲಿ ಸಹಪ್ರವರ್ತನ, ಜೂನ್ ೧೮
ಎರಡನೆಯ ಕನ್ನಡ ಸಾಹಿತ್ಯ ಸಮ್ಮೇಳನ, ಡಿಸೆಂಬರ್ ೫, ಲಾಸ್ ಏಂಜಲಿಸ್ ಬಳಿಯ ಲೇಕ್‍ವುಡ್ ಊರಿನ ಹೂವರ್ ಹರ್ಬರ್ಟ್ ಮಾಧ್ಯಮಿಕ ಶಾಲೆಯಲ್ಲಿ
ಸಹಪ್ರವರ್ತಕರು: ಕರ್ನಾಟಕ ಸಾಂಸ್ಕೃತಿಕ ಸಂಘ – ದಕ್ಷಿಣ ಕ್ಯಾಲಿಫ಼ೋರ್ನಿಯ, ಕಸ್ತೂರಿ ಕನ್ನಡ ಸಂಘ, ಸಾನ್ ಡಿಯೇಗೋ, ಮತ್ತು “ಅಂಜಲಿ,” ಲಾಸ್ ಏಂಜಲಿಸ್
ಮುಖ್ಯ ವಸ್ತು: ಕನ್ನಡ ಸಾಹಿತ್ಯದಲ್ಲಿ ಸೃಜನಶೀಲತೆ
ಮುಖ್ಯ ಅತಿಥಿ: ಪ್ರೊ. ಬರಗೂರು ರಾಮಚಂದ್ರಪ್ಪ; ಭಾಷಣ: “ಕನ್ನಡ ಸಾಹಿತ್ಯ ಮತ್ತು ಸೃಜನಶೀಲ ಸ್ವಾತಂತ್ರ್ಯ”
ಪುಸ್ತಕ ಬಿಡುಗಡೆ: “ಆಚೀಚೆಯ ಕತೆಗಳು” ಪ್ರಧಾನ ಸಂಪಾದಕ: ಗುರುಪ್ರಸಾದ ಕಾಗಿನೆಲೆ
೨೦೦೬
ಕನ್ನಡ ಸಾಹಿತ್ಯ ಶಿಬಿರ – ಅಮೆರಿಕದ ಒಂಬತ್ತು ನಗರಗಳಲ್ಲಿ ಜೂನ್-ಆಗಸ್ಟ್ ಕಾಲಾವಧಿಯಲ್ಲಿ ಎರಡು ದಿನಗಳ ಕನ್ನಡ ಸಾಹಿತ್ಯ ಚರಿತ್ರೆಯ ಕ್ರಮಬದ್ಧ ಅಭ್ಯಾಸ ಶಿಬಿರ; ಅಮೆರಿಕದಲ್ಲಿ ಈ ಪ್ರಮಾಣದಲ್ಲಿ ನಡೆದ ಮೊಟ್ಟಮೊದಲ ಶಿಬಿರ.
ಉಪನ್ಯಾಸಕರು: ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
ಉಪನ್ಯಾಸದ ಟಿಪ್ಪಣಿಗಳು, ೪ ಧ್ವನಿಮುದ್ರಿಕೆಗಳ (CD) ಸಂಪುಟದ ಹಂಚಿಕೆ.
೨೦೦೭
- ಲಾಸ್ ಏಂಜಲಿಸ್‍ನ “ಅಂಜಲಿ” ಪ್ರಕಟಿಸಿದ “ಕನ್ನಡದಮರ ಚೇತನ (ಮಾಸ್ತಿ ವೆಂಕಟೇಶ ಅಯ್ಯಂಗಾರ್ ಸಾಹಿತ್ಯ ಸಮೀಕ್ಷೆ)” ಯೋಜನೆಯಲ್ಲಿ ಸಹಾಯ.
- ಆದಾಯ ತೆರಿಗೆ ವಿನಾಯಿತಿ ಸ್ಥಾನಕ್ಕೆ IRS ನೊಂದಿಗೆ ಅರ್ಜಿ ಸಲಿಸಿಕೆ.
- ರಂಗದ ಅಂತರ್ಜಾಲ ತಾಣದ ಉದ್ಘಾಟನೆ (http://www.KannadaSahityaRanga.org)
೨೦೦೮
ಆಡಳಿತ ಮಂಡಲಿಯ ಪುನರ್ರಚನೆ ಮತ್ತು ಚುನಾವಣೆ; ಕಾರ್ಯಕಾರೀ ಸಮಿತಿಯ ಚುನಾವಣೆ
***
ವಿ.ಸೂ. ಮುಖ್ಯ ಅತಿಥಿಗಳ ಭಾಷಣಗಳನ್ನು ಪ್ರತ್ಯೇಕವಾಗಿ ಮುದ್ರಿಸಿದೆ. ಇವನ್ನು ಸಮ್ಮೇಳನದಲ್ಲಿ ಉಚಿತವಾಗಿ ಪಡೆಯಬಹುದು, ಪುಸ್ತಕಗಳನ್ನು ಕೊಳ್ಳಬಹುದು.